Wednesday, 30th September 2020

ಕರೋನಾ ಭೀತಿಯಿಂದಾಗಿ ಜೆಡಿಎಸ್ ಸಭೆ ಮುಂದೂಡಿಕೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು

ರಾಜ್ಯ ಸರಕಾರದ ಜನ ವಿರೋಧಿ ಕಾಯಿದೆ ತಿದ್ದುಪಡಿಗಳ ಬಗ್ಗೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಹೋರಾಟ ರೂಪಿಸುವ
ಕುರಿತು ಆ. 4ರಂದು ನಡೆಯಬೇಕಿದ್ದ ಜೆಡಿಎಸ್ ಸಭೆಯನ್ನು ಮುಂದೂಡಲಾಗಿದೆ ಎಂದು ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ  ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಮಂಗಳವಾರ ಸಭೆ ಕರೆಯಲಾಗಿತ್ತು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಕರೋನಾ ಸೋಂಕು ರಾಜ್ಯದಲ್ಲಿ ಹಾಗೂ ದೇಶದಲ್ಲಿ ಭೀಕರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಸಾಮೂಹಿಕವಾಗಿ ಸೇರುವುದು ಸರಿಯಲ್ಲ  ಎಂಬುದನ್ನು  ತೀರ್ಮಾನಿಸಿರುವ  ದೇವೇಗೌಡರು ಆ.4 ರ ಮಂಗಳವಾರದಂದು ಜೆ.ಪಿ ಭವನದಲ್ಲಿ ಕರೆದಿದ್ದ,  ಜೆಡಿಎಸ್ ಪಕ್ಷದ ಶಾಸಕರು, ಸೋತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಅಧ್ಯಕ್ಷರ ಪೂರ್ವಭಾವಿ  ಸಭೆಯನ್ನು ಮುಂದೂಡಲಾಗಿದೆ ಎಂದು ಎಚ್.ಡಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *