Saturday, 4th July 2020

ಕೊರೊನಾ ತಡೆಗೆ ಜಿಲ್ಲಾಡಳಿತ, ಜನರಿಂದ ಉತ್ತಮ ಸ್ಪಂದನೆ :

ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್
ಚಾಮರಾಜನಗರ
ಜಿಲ್ಲೆಯಲ್ಲಿ ಕೋವಿಡ್-19 ತಡೆಗಾಗಿ ಜಲ್ಲೆಯ ಜನರು ಒಳ್ಳೇಯ ಸಹಕಾರ ನೀಡುತ್ತಿದ್ದಾರೆ. ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ತಡೆ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಆರಂಭದಿಂದಲೂ ಕೊರೊನಾ ತಡೆಗಾಗಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲೆಯಲ್ಲಿ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಅಧಿಕಾರಿಗಳು ಇಡೀ ತಂಡವಾಗಿ ಕೆಲಸ ಮಾಡುತ್ತಿದ್ದು, ಕೋವಿಡ್ ಹರಡದಂತೆ ನಿಗಾ ವಹಿಸಿದ್ದಾರೆ. ಜಿಲ್ಲೆಯ ಜನರು ಸಹ ಜಿಲ್ಲಾಡಳಿತಕ್ಕೆ ಬೆಂಬಲವಾಗಿದ್ದು, ಲಾಕ್‍ಡೌನ್ ಅವಧಿಯಲ್ಲಿ ಪೂರಕವಾಗಿ ಸ್ಪಂದಿಸುವ ಮೂಲಕ ಸಹಕಾರ ನೀಡುತ್ತಿದ್ದಾರೆ ಎಂದರು.
ಲಾಕ್‍ಡೌನ್ ಅವಧಿಯಲ್ಲಿ ಜನರಿಗೆ ಅಗತ್ಯವಾದ ಪಡಿತರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ ನಿರಾಶ್ರಿತರು, ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ. ಸಾಮೂಹಿಕ ಪ್ರಯತ್ನದ ಫಲವಾಗಿ ಜಿಲ್ಲೆಯನ್ನು ಹಸಿರು ವಲಯವಾಗಿಯೇ ಉಳಿಸಿಕೊಳ್ಳುವ ಪ್ರಯತ್ನ ಮುಂದುವರೆದಿದೆ ಎಂದು ಲೋಕಸಭಾ ಸದಸ್ಯರು ಹೇಳಿದರು.
    ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿಗಳು ನಡೆಯಲಿವೆ. ಬೈಪಾಸ್ ರಸ್ತೆ, ಇತರೆ ಕಾಮಗಾರಿಯನ್ನು ನಿರ್ವಹಿಸಲಾಗುತ್ತದೆ. ಈ ಬಗ್ಗೆ ತಾವು ಗಮನ ಹರಿಸಿದದು, ಎಲ್ಲಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ನಗರದ ಪದವಿ ಕಾಲೇಜಿನಲ್ಲಿ ಇಂಟಿಗ್ರೇಟೆಡ್ ಕೋರ್ಸ್ ಆರಂಭಕ್ಕೆ ಅಗತ್ಯವಾಗಿರುವ ನೆರವು ನೀಡಲಾಗುತ್ತಿದೆ. ಇದೇ ರೀತಿ ನವೋದಯ ಶಾಲೆಗೆ ಸೋಲಾರ್ ವ್ಯವಸ್ಥೆಗಾಗಿ 16 ಲಕ್ಷ ರೂ. ಗಳ ಆರ್ಥಿಕ ನೆರವು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡುವ ಉದ್ದೇಶವಿದೆ ಎಂದರು.
    ಲಾಕ್‍ಡೌನ್ ಕಾರಣದಿಂದ ಸಂಕಷ್ಟದಲ್ಲಿರುವ ನಗರದ ಆಟೋ, ಟ್ಯಾಕ್ಸಿ ಚಾಲಕರಿಗೆ ಆಹಾರ ದಿನಸಿ ಪದಾರ್ಥಗಳ ಕಿಟ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಚಾಲಕರ ಪಟ್ಟಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸÀಲಾಗಿದೆ ಎಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು. ಇದೇ ವೇಳೆ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಟಿಗ್ರೇಟೆಡ್ ಕೋರ್ಸ್ ಆರಂಭಕ್ಕೆ ಅಗತ್ಯವಿರುವ ಆರಂಭಿಕ ನೆರವಿಗಾಗಿ ಚೆಕ್ ಅನ್ನು ಕಾಲೇಜಿನ ಪ್ರಾಂಶುಪಾಲರಿಗೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ನೀಡಿದರು.
   ಶಾಸಕರಾದ ಎನ್. ಮಹೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಎಸ್. ಮಹೇಶ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಉಪವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಜಿಲ್ಲಾ ಅರೋಗ್ಯಾಧಿಕಾರಿ ಡಾ. ಎಂ.ಸಿ. ರವಿ  ಹಾಜರಿದ್ದರು.

Leave a Reply

Your email address will not be published. Required fields are marked *