Saturday, 22nd February 2020

‘ಪೈಲ್ವಾನ್’ಗೆ ಪೈರಸಿ ಕಾಟ: ದೂರು ದಾಖಲು

ಬೆಂಗಳೂರು: ನಟ ಸುದೀಪ್ ಅಭಿನಯದ ‘ಪೈಲ್ವಾಾನ್’ ಚಿತ್ರವನ್ನು ಪೈರಸಿ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳಿಿ ಎಂದು ಚಿತ್ರದ ನಿರ್ಮಾಪಕಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾಾರೆ.

ಪೈಲ್ವಾಾನ್ ಚಿತ್ರ ಸೆ.12ರಂದು ಪಂಚ ಭಾಷೆಗಳಲ್ಲಿ 3 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡಿತ್ತು. ಆದರೆ, ಚಿತ್ರ ಬಿಡುಗಡೆಯ ದಿನವೇ ಎಲ್ಲಾ ಕಡೆ ಪೈರಸಿಯಾಗಿದೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕಿ ಸ್ವಪ್ನ ಕೃಷ್ಣ ಅವರು, ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿನ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ನಿರ್ಮಾಪಕಿ ಸ್ವಪ್ನ ಕೃಷ್ಣ, ಸಾಮಾಜಿಕ ಮಾಧ್ಯಮದಲ್ಲಿ ಸಿನಿಮಾವನ್ನು ಪೈರಸಿ ಮಾಡಿ ಹರಿಬಿಟ್ಟಿಿದ್ದಾರೆ. ಈ ಬಗ್ಗೆೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇವೆ. ಸುಮಾರು 3,500ಕ್ಕೂ ಹೆಚ್ಚು ಲಿಂಕ್‌ಗಳನ್ನು ಪೊಲೀಸರಿಗೆ ನೀಡಿದ್ದೇವೆ. ಇದನ್ನು ಯಾರು ಮಾಡಿದ್ದಾರೆ ಎನ್ನುವುದು ಗೊತ್ತಿಿಲ್ಲ. ದರ್ಶನ್ ಅಭಿಮಾನಿಗಳು ಸಿನಿಮಾವವನ್ನು ಪೈರಸಿ ಮಾಡಿದ್ದಾರೆಂದು ನಾನು ಹೇಳುವುದಿಲ್ಲ. ನಾನು ಯಾರ ಮೇಲೂ ಆರೋಪ ಮಾಡಲ್ಲ. ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ. ಯಾರೇ ಈ ರೀತಿ ಪೈರಸಿ ಮಾಡಿದರು ಅದು ತಪ್ಪುು. ಚಿತ್ರರಂಗದ ಬೆಳವಣಿಗೆಗೆ ಪೈರಸಿ ಅನ್ನುವುದು ಮಾರಕವಾಗಿದೆ ಎಂದರು.

Leave a Reply

Your email address will not be published. Required fields are marked *