Wednesday, 5th August 2020

ರಾಜಕೀಯ ಕಾರಣಕ್ಕೆ ಸಿದ್ದು ಆರೋಪ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ಕೊಪ್ಪಳ:

ರಾಜ್ಯದಲ್ಲಿ ಸಿದ್ದರಾಮಯ್ಯ ಸಿಎಂ ಇರುವಾಗಲೂ ರಾಕೇಶ್ ಸೂಪರ್ ಸಿಎಂ ಆಗಿದ್ದರು. ಕೆಂಪಯ್ಯ ಗೃಹಸಚಿವ ಎಂಬ ಮಾತುಗಳಿದ್ದವು. ಈಗಲೂ ಸಹ ಅದೇ ರೀತಿಯಾಗಿ ಸಿಎಂ ಬಿಎಸ್ವೈ ಬಗ್ಗೆ ಆರೋಪಿಸಲಾಗುತ್ತಿದೆ. ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು ನಿರಾಧಾರ ಆರೋಪ. ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ಚುನಾವಣೆ ಸಮಯದಲ್ಲಿ ನಮ್ಮ ಗೆಲುವಿಗಾಗಿ ಕುಟುಂಬ ಸದಸ್ಯರೆಲ್ಲರೂ ದುಡಿದಿರುತ್ತಾರೆ. ಹೀಗಾಗಿ ಕೆಲವೊಂದು ಸಲಹೆ, ಸೂಚನೆ ಕೊಡುತ್ತಾರೆ. ಹಾಗೆಂದ ಮಾತ್ರಕ್ಕೆ ಅವರೇ ನಮ್ಮ ಪರವಾಗಿ ಆಡಳಿತ ನಡೆಸುತ್ತಿದ್ದಾರೆಂದು ಹೇಳುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಾದರೂ ಸಲಹೆ ನೀಡಬಹುದು. ಅದನ್ನು ಸ್ವೀಕಾರ ಮಾಡಬಹುದು ಅಥವಾ ಬಿಡಬಹುದು ಎಂದರು.

ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದಿಂದ ಮತ್ತು ಕಾಂಗ್ರೆಸ್ ಮೋಸ ಮಾಡಿದ್ದರಿಂದಲೇ ನಾವು ಪಕ್ಷ ಬಿಟ್ಟಿದ್ದು. ಸಿದ್ದರಾಮಯ್ಯ ಸರಿಯಾಗಿ ನಿರ್ವಹಣೆ ಮಾಡದಿದ್ದರಿಂದಲೇ ಅಂತಹ ಸನ್ನಿವೇಶ ಸೃಷ್ಟಿಯಾಯಿತು ಎಂದು ಆರೋಪಿಸಿದರು.

ಆರ್.ಶಂಕರ್, ಎಂಟಿಬಿ ನಾಗರಾಜ, ವಿಶ್ವನಾಥ ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಸಿಎಂ ಬಿಎಸ್ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಎಂಟಿಬಿಯವರಿಗೆ ಬಚ್ಚೆಗೌಡ ಕುಟುಂಬದಿಂದ ಅನ್ಯಾಯ ಆಗಿರುವುದು ನಿಜ. ಚುನಾವಣೆಯಲ್ಲಿ ಶರತ್ ಬಚ್ಚೆಗೌಡ ಸ್ಪರ್ಧೆ ಮಾಡದಂತೆ ಪಕ್ಷ ಸೂಚಿಸಿದರೂ ಸ್ಪರ್ಧೆ ಮಾಡಿದ್ದರಿಂದ ನಾಗರಾಜ ಸೋಲಬೇಕಾಯಿತು. ಯಡಿಯೂರಪ್ಪ ಅದನ್ನು ಸರಿಪಡಿಸುವರೆಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *