Tuesday, 29th November 2022

ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭ: ಸಚಿವ ಬಿಸಿ ನಾಗೇಶ್

ಬೆಂಗಳೂರು: ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ದತೆ ನಡೆಸಲಾಗಿದೆ. ಕಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸಭೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

ಸೆಪ್ಟಂಬರ್‌ 27 ಮತ್ತು 29ರಂದು ನಡೆದಿದ್ದ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

ಟ್ಟು 53,155 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 29,522 ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ. ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯಲ್ಲಿ ಶೇ.55.54ರಷ್ಟು ಫಲಿತಾಂಶ ಬಂದಿದೆ. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಿದೆ.

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗ್ರಿಸ್ಮಾ ನಾಯ್ಕ್ (599 ಅಂಕ) ಮೊದಲ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.