Sunday, 14th August 2022

ಹೆಸರಿಗಷ್ಟೇ ಸಾಮಾಜಿಕ ನ್ಯಾಯ: ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾಶಸ್ತ್ಯ ಸಿಕ್ಕಿಲ್ಲ

ಬೆಂಗಳೂರು: ಪ್ರಾದೇಶಿಕ ಸಮತೋಲನ, ಪ್ರದೇಶವಾರು, ಸಾಮಾಜಿಕ ನ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹೇಳಿಕೊಂಡರೂ ಈಗ ರಚನೆಯಾಗಿರುವ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾಶಸ್ತ್ಯ ಸಿಕ್ಕಿಲ್ಲ. ಸಂಪುಟದಲ್ಲಿ 13 ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ.

ಮೈಸೂರು, ಕಲಬುರಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣ ಗೆರೆ, ಕೋಲಾರ, ಯಾದಗಿರಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಂಪುಟದಲ್ಲಿ ಸ್ಥಾನಮಾನ ಸಿಕ್ಕಿಲ್ಲ. ಕೇವಲ 18 ಜಿಲ್ಲೆಗಳಿಗೆ ಮಾತ್ರ ಮಣೆ ಹಾಕಲಾಗಿದೆ.

ಚಿಕ್ಕಮಗಳೂರಿನಲ್ಲಿ ನಾಲ್ವರು, ದಾವಣಗೆರೆ 5, ಬಳ್ಳಾರಿ 2, ಮೈಸೂರು 3, ಕೊಡಗು 2, ವಿಜಯಪುರ, ಯಾದಗಿರಿ ತಲಾ ಮೂವರು ಶಾಸಕರು ಇದ್ದರು ಕೂಡ ಈ ಜಿಲ್ಲೆಗಳಿಗೆ ಸ್ಥಾನಮಾನ ನೀಡದಿರುವುದು ಅಸಮಾ ಧಾನಕ್ಕೆ ಕಾರಣವಾಗಿದೆ.

ಈ ಬಾರಿ ಸಂಪುಟದಲ್ಲಿ ಮಧ್ಯಕರ್ನಾಟಕ ರಾಜಧಾನಿ ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ಪ್ರಾಶಸ್ತ್ಯ ಸಿಗಲಿದೆ ಎಂಬ ನಿರೀಕ್ಷೆ ಇತ್ತು. 6 ಜಿಲ್ಲೆಗಳಿಂದ ತಲಾ ಇಬ್ಬರು ಶಾಸಕರಿಗೆ ಮಣೆ ಹಾಕಲಾಗಿದೆ. ಬೆಳಗಾವಿ, ಹಾವೇರಿ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಉಡುಪಿ ಜಿಲ್ಲೆಗಳಿಗೆ ಎರಡು ಸ್ಥಾನವನ್ನು ಕೊಡಲಾಗಿದೆ.