ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತನ ಮೇಲೆ ದುಷ್ಕರ್ಮಿಯೊಬ್ಬರು ಹಲ್ಲೆ ಮಾಡಿದ್ದರಿಂದ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ.
ಇದರಿಂದಾಗಿ ನಗರದಲ್ಲಿ ಕೋಮುಗಲಭೆ ಆರಂಭವಾಗುವ ಮುನ್ಸೂಚನೆ ಕೂಡ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಶನಿವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.
ನಗರದ ಲಷ್ಕರ್ ಮೊಹಲ್ಲಾದ ಭಜರಂಗದಳದ ಸಹ ಸಂಚಾಲಕ ನಾಗೇಶ್ ಎಂಬುವರು ನೆಹರೂ ಕ್ರೀಡಾಂಗಣದಲ್ಲಿ ವಾಕಿಂಗ್ ಮುಗಿಸಿ, ಬೈಕ್ ನಲ್ಲಿ ವಾಪಾಸ್ ಬರುವಾಗ, ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದಾಗಿ ನಾಗೇಶ್ ಮೂಗಿಗೆ ಗಂಭೀರವಾಗಿದ್ದು, ನಾಗೇಶ್ ಸ್ಥಳದಿಂದ ತಪ್ಪಿಸಿಕೊಂಡು ಬಂದು, ಆಸ್ಪತ್ರೆಗೆ ದಾಖಲಾಗಿದ್ದರು.
ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಸಂಘಟನೆ ಮುಖಂಡರು, ಕಾರ್ಯಕರ್ತರು ಆಸ್ಪತ್ರೆ ಮುಂದೆ ಜಮಾಯಿಸಿದರು. ನಾಗೇಶ್ ಆರೋಗ್ಯ ಸ್ಥಿತಿ ವಿಚಾರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿರುವುದರಿಂದ, ಮುಂಜಾ ಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.