Monday, 3rd October 2022

14,917 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,917 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ  ಸೋಂಕಿಗೆ 32 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,27,069 ಕ್ಕೆ ಏರಿಕೆಯಾಗಿದೆ.

ಇನ್ನು 1,17,508 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.53 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,36,23,804 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,08,25,13,831 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,98,271 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.