Monday, 15th August 2022

16,135 ಕೋವಿಡ್ 19 ಸೋಂಕು ಪ್ರಕರಣಗಳು ದೃಢ

Omicron

ನವದೆಹಲಿ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 16,135 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. 24 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 13,958 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,13,864ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾದ ಪರಿಣಾಮ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿ ದಾಟಿರುವುದಾಗಿ ಅಂಕಿ-ಅಂಶ ವಿವರಿಸಿದೆ.

ಪಶ್ಚಿಮ ಬಂಗಾಳ, ಒಡಿಶಾ ಮತ್ತು ಅಸ್ಸಾಂನಲ್ಲಿ ಕೋವಿಡ್ ಸೋಂಕು ಪ್ರಕರಣದಲ್ಲಿ ಹೆಚ್ಚಳ ಕಂಡಿದೆ.