Tuesday, 21st March 2023

ಭ್ರಷ್ಟಾಚಾರ ಪ್ರಕರಣ: ಲಾಲುನ 17 ಸ್ಥಳಗಳಲ್ಲಿ ಸಿಬಿಐ ದಾಳಿ

ಪಾಟ್ನಾ: ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಮೇಲೆ ಹೊಸ ಭ್ರಷ್ಟಾಚಾರ ಪ್ರಕರಣ ದಾಖ ಲಾಗಿದೆ. ಲಾಲು ಯಾದವ್‌ಗೆ ಸಂಬಂಧಿಸಿದ 17 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ ದಾಳಿ ಮಾಡಿದೆ.

ಸಿಬಿಐ ಅಧಿಕಾರಿಗಳು ಬೆಳಗ್ಗೆ ಪಾಟ್ನಾದ ಅವರ ನಿವಾಸಕ್ಕೆ ಆಗಮಿಸಿ ಶೋಧ ನಡೆಸಿದ್ದಾರೆ. ದೆಹಲಿ ಮತ್ತು ಪಾಟ್ನಾದಲ್ಲಿ ದಾಳಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಲಾಲು ಸಂಬಂಧಿಕರ ಮೇಲೂ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

1990 ರಿಂದ 1995 ಮತ್ತು 1995 ರಿಂದ 1997 ರವರೆಗೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಲಾಲು, ಪಾಟ್ನಾದಲ್ಲಿರುವ ತಮ್ಮ ಪತ್ನಿ ಮತ್ತು ಇತರರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಲಾಲು ಅವರ ಕಿರಿಯ ಪುತ್ರ ಮತ್ತು ಪಕ್ಷದ ನಾಯಕ ತೇಜಸ್ವಿ ಯಾದವ್ ಪ್ರಸ್ತುತ ಲಂಡನ್‌ನಲ್ಲಿದ್ದಾರೆ.

ಮೇ 5 ರಂದು ದೆಹಲಿಯ ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದ ಲಾಲು ಸದ್ಯ ದೆಹಲಿಯಲ್ಲಿದ್ದಾರೆ. ಮೇವು ಖರೀದಿಗಾಗಿ ಇರಿಸಿದ್ದ 139 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡ ಒಂದು ಪ್ರಕರಣದಲ್ಲಿ ಫೆಬ್ರುವರಿ 21ರಂದು ತೀರ್ಪು ಪ್ರಕಟವಾಗಿತ್ತು. 

error: Content is protected !!