Tuesday, 9th August 2022

17,073 ಹೊಸ ಕೋವಿಡ್ ಪ್ರಕರಣ ದೃಢ

#corona

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದೆ. ದೇಶದಲ್ಲಿ ಸೋಮವಾರ ಮುಕ್ತಾಯ ವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 17,073 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 21 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,07,046ಕ್ಕೆ ಏರಿಕೆಯಾಗಿದೆ. ಅಲ್ಲದೇ, ಮೃತಪಟ್ಟ ವರ ಸಂಖ್ಯೆ 5,25,020ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 94,420ಕ್ಕೆ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 15,208 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,87,606ಕ್ಕೆ ತಲುಪಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 3,03,604 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 86,10,15,683 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,97,11,91,329 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.