Monday, 3rd October 2022

1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ.

ಕಳೆದ 24 ಗಂಟೆಯಲ್ಲಿ 1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,31,283ಕ್ಕೆ ಏರಿಕೆ ಯಾಗಿದೆ. ಇನ್ನೂ ರಾಜ್ಯದಲ್ಲಿ ಕರೋನಾದಿಂದ ಮೂರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,147ಕ್ಕೆ ಏರಿಕೆಯಾಗಿದೆ.

 

ಬೆಂಗಳೂರಿನಲ್ಲಿ 1,108 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,51,948ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 1,017 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,80,172ಕ್ಕೆ ಏರಿಕೆಯಾಗಿದೆ.