Sunday, 14th August 2022

18,819 ಕರೋನಾ ಪ್ರಕರಣ ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 18,819 ಪ್ರಕರಣಗಳು ದಾಖಲಾಗಿದ್ದು, ಬುಧವಾರಕ್ಕೆ ಹೋಲಿಸಿದರೆ ಶೇಕಡ 29.7 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

122 ದಿನಗಳ ಬಳಿಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷ ದಾಟಿದ್ದು, ಸದ್ಯ 1,04,555 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳಲ್ಲಿ 39 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,116 ರಷ್ಟಾಗಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 4.16ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 3.72 ರಷ್ಟಾಗಿದೆ.