Saturday, 27th July 2024

ಇಂದಿನಿಂದ ಮಂಗಳೂರಿನಿಂದ ಮಡಗಾಂವ್‌ಗೆ ವಂದೇ ಭಾರತ್ ಎಕ್ಸಪ್ರೆಸ್‌ ರೈಲು ಆರಂಭ

ಕಾರವಾರ: ಇಂದಿನಿಂದ (ಡಿ.30) ಮಂಗಳೂರಿನಿಂದ ಮಡಗಾಂವ್‌ಗೆ ಆರಂಭಗೊಳ್ಳುವ ವಂದೇ ಭಾರತ್ ಎಕ್ಸಪ್ರೆಸ್‌ ರೈಲಿಗೆ ಕಾರವಾರ ರೈಲ್ವೆ ನಿಲ್ದಾಣ ದಲ್ಲಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಡಿ.30ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ಹೊರಡುವ ಈ ರೈಲು ಮಧ್ಯಾಹ್ನ 2.52ಕ್ಕೆ ಕಾರವಾರ ರೈಲ್ವೆ ನಿಲ್ದಾಣ ತಲುಪಲಿದೆ.
ನಂತರ ಶಾಸಕ ಸತೀಶ್ ಸೈಲ್ ರೈಲಿಗೆ ಹಸಿರು ನಿಶಾನೆ ತೋರುವ ಮೂಲಕ ರೈಲು ಮಡಗಾಂವ್‌ಗೆ ತೆರಳಲಿದೆ. ಈ ರೈಲಿನಲ್ಲಿ ಕಾರವಾರದಿಂದ ಮಡಂಗಾ ವ್‌ಗೆ ತೆರಳಲು ಮತ್ತು ವಾಪಸ್ ಕಾರವಾರಕ್ಕೆ ಆಗಮಿಸಲು 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಿಸಲಾಗಿದೆ ಎಂದು ಕೊಂಕಣ ರೈಲ್ವೆ ಕಾರವಾರದ ಹಿರಿಯ ಪ್ರಾದೇಶಿಕ ಇಂಜಿನಿಯರ್ ಬಿ.ಎಸ್ ನಾಡಗೆ ತಿಳಿಸಿದ್ದಾರೆ.
ಈ ರೈಲು ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಏರ್ ಲೈನ್ ಮಾದರಿಯ ಸೀಟುಗಳ ಜೊತೆಗೆ ಎಕ್ಸಿಕ್ಯೂಟಿವ್ ಚೇರ್‌ಗಳು ಮತ್ತು ಸಸ್ಯಾಹಾರಿ ಮತ್ತು ಮಾಂಸಾಹಾರಿ ಊಟದ ವ್ಯವಸ್ಥೆ ಕೂಡಾ ಇದೆ. ಆನ್ಬೋರ್ಡ್ ವೈಫೈ, ರೀಡಿಂಗ್ ಲೈಟ್ ವ್ಯವಸ್ಥೆ, ಸ್ವಯಂ ಚಾಲಿತ ಬಾಗಿಲುಗಳು, ಸ್ಮೋಕ್ ಅಲರ್ಟ್ , ಸಿಸಿಟಿವಿಗಳು ಮತ್ತಿತರ ಆಧುನಿಕ ಸೌಲಭ್ಯಗಳು ಇವೆ.
ಗುರುವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದ್ದು, ಬೆಳಗ್ಗೆ 11ಕ್ಕೆ ಮಂಗಳೂರುನಿಂದ ಹೊರಟು 12.25ಕ್ಕೆ ಉಡುಪಿ, 2.52ಕ್ಕೆ ಕಾರವಾರ 4.40 ಕ್ಕೆ ಮಡಂಗಾವ್ ತಲುಪಲಿದೆ. ಮಡಗಾಂವ್ ನಿಂದ ಸಂಜೆ 5.10ಕ್ಕೆ ಹೊರಟು, 5.50ಕ್ಕೆ ಕಾರವಾರ, 8.10ಕ್ಕೆ ಉಡುಪಿ, 10.15 ಕ್ಕೆ ಮಂಗಳೂರು ತಲುಪ ಲಿದೆ. ಮಾರ್ಗಮಧ್ಯೆ ಕಾರವಾರ ಮತ್ತು ಉಡುಪಿ ಹೊರತುಪಡಿಸಿ ಬೇರೆಲ್ಲೂ ನಿಲುಗಡೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!