ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದ ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ.
ಆಶ್ರಮದಲ್ಲಿರುವ 270 ಜನರಲ್ಲಿ 210 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮೂಹಿಕ ಪರೀಕ್ಷೆ ಮಾಡಿದ್ದು, ಈ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಒಟ್ಟು 270 ಜನರಿರುವ ಆಶ್ರಮ ಇದಾ ಗಿದ್ದು, ಕಳೆದ ಕೆಲ ದಿನಗಳ ಹಿಂದೆ ಕೆಲವು ಮಂದಿಯಲ್ಲಿ ಕಂಡು ಬಂದಿದ್ದ ಸೋಂಕು ಕಂಡುಬಂದಿತ್ತು.
ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೊವೀಡ್ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮುಂದಾಗಿದ್ದಾರೆ. 10ಕ್ಕೂ ಹೆಚ್ಚು ಅಂಬು ಲೆನ್ಸ್ ಸ್ಥಳಾಂತರ ಮಾಡಲಾಗುತ್ತದೆ.
ಧರ್ಮಸ್ಥಳದ ರಜತಾದ್ರಿ ವಸತಿಗೃಹಕ್ಕೆ ಸೋಂಕಿತರು ಸ್ಥಳಾಂತರವಾಗಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ರಜತಾದ್ರಿ ವಸತಿ ಗೃಹ ಕೋವಿಡ್ ಕೇರ್ ಸೆಂಟರ್ ಆಗಿ ಬದಲಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿದೆ.