Friday, 12th August 2022

2527 ಮಂದಿಗೆ ಸೋಂಕು ದೃಢ

covid

ನವದೆಹಲಿ: ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆ ಭೀತಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 2527 ಮಂದಿಗೆ ಸೋಂಕು ದೃಢಪಟ್ಟಿದೆ. ಇದೇ ವೇಳೆ 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,22,149ಕ್ಕೆ ಏರಿದೆ.

ದೇಶದಲ್ಲಿ ಸದ್ಯ 15,079 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 4,25,17,724ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 1,656 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಸಿ ಕೊಂಡವರ ಸಂಖ್ಯೆ 4,25,17,724 ಕ್ಕೆ ತಲುಪಿದೆ.

ರಾಷ್ಟ್ರ ರಾಜಧಾನಿಯಲ್ಲಿ 1042 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 18,72,699ಕ್ಕೆ ಏರಿದೆ.