Sunday, 3rd July 2022

2,710 ಕೋವಿಡ್ ಪ್ರಕರಣ ಪತ್ತೆ, 14 ಮಂದಿ ಸಾವು

#corona

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಏರಿಳಿಕೆ ಮುಂದುವರೆದಿದೆ. ಶುಕ್ರವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,710 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,47,530ಕ್ಕೆ ಏರಿಕೆ ಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,814ಕ್ಕೆ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 2,296 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,07,177ಕ್ಕೆ ತಲುಪಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 4,52,580 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,92,97,74,973 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.