Friday, 27th May 2022

ಕರೋನಾ ಏರಿಳಿಕೆ: 2,85,914 ಹೊಸ ಕೇಸ್ ಪತ್ತೆ

covid

ನವದೆಹಲಿ: ಕರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಹೊಸ ಕೇಸ್ ಪತ್ತೆಯಾಗಿದೆ.

665 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,00,85,116ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,91,127ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,23,018ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 2,99,073 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,73,70,971ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,63,58,44,536 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.