Tuesday, 29th September 2020

50 ಲಕ್ಷ ಮೌಲ್ಯದ ಗಾಂಜಾ ಸಿಸಿಬಿ ವಶಕ್ಕೆ

*ಗಾಂಜಾ ವಶಪಡಿಸಿಕೊಂಡ ಸಿಸಿಬಿ ಟೀಂ
*ಪೊಲೀಸರಿಂದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ 90 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ಈ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಈ ಮೂವರನ್ನು ಆಜಾಂಪಾಷಾ, ಮಸ್ತಾನ್, ಅಬ್ಬಾಸ್ ಎಂದು ಗುರು ತಿಸಲಾಗಿದೆ.  ಖಚಿತ ಮಾಹಿತಿ ಮೇರೆಗೆ ಬಂಧಿತ ಅಜಾಂ ಪಾಷಾ ಅವರ ಕಾಡುಗೋಡಿ ಬಿಡಿಎ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಗಾಂಜಾ ಆಮದು ಮಾಡಲಾಗಿದ್ದು, ದಂಧೆಕೋರರಿಗೆ ವಿಶಾಖಪಟ್ಟಣಂನ ಪ್ರವೀಣ್ ಗಾಂಜಾ ಮಾರಾಟ ಮಾಡಿದ್ದನೆಂದು ತಿಳಿದು ಬಂದಿದೆ. ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರವನ್ನು ಮಾದಕವಸ್ತುಗಳಿಂದ ಮುಕ್ತವಾದ ನಗರವನ್ನಾಗಿಸುವ ಉದ್ದೇಶದಿಂದ ಡ್ರಗ್ಸ್ ಸೇವನೆ, ಅಕ್ರಮ ಸಾಗಾಣಿಕೆ, ಸರಬರಾಜು ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಬೆಂಗಳೂರು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದವರು ನಿರಂತರ ಕ್ರಮ ಕೈಗೊಂಡಿದ್ದಾರೆ.

ಈ ತಂಡದವರು ಬೆಂಗಳೂರು ನಗರ ಕಾಡುಗೋಡಿಯ ದೊಡ್ಡ ಬನಹಳ್ಳಿಯ ಸಫಲ್ ಮಾರ್ಕೆಟ್ ಹಿಂಭಾಗ ಇರುವ ವಿಂಧ್ಯಗಿರಿ ಬಿಡಿಎ ಅಪಾರ್ಟ್‍ಮೆಂಟ್ 13ನೇ ಮಹಡಿಯಲ್ಲಿ ವಾಸವಾಗಿದ್ದ ಅಜಾಮ್ ಪಾಷ ಎಂಬುವನ್ನು ತನ್ನಸ ಸಹಚರರಾದ ಮಸ್ತಾನ್ ವಾಲಿ, ಮೊಹಮದ್ ಅಬ್ಬಾಸ್, ಹಪ್ಪು ಜೊತೆ ಸೇರಿಕೊಂಡು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನೂರಾರು ಕೆಜಿ ಗಾಂಜಾ ವನ್ನು ಖರೀದಿಸಿ ತನ್ನ ಫ್ಲಾಟ್‍ನಲ್ಲಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಹೋಗಿ ಅಲ್ಲಿ ಪ್ರವೀಣ್ ಎಂಬುವನಿಂದ ಗಾಂಜಾವನ್ನು ಖರೀದಿಸಿಕೊಂಡು ತಂದು ತಮ್ಮ ಸಬ್ ಪೆಡ್ಲರ್‍ಗಳ ಮುಖಾಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಹಾಗೂ ಇತರೆ ಕರ್ನಾಟಕದ ಇತರೇ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ತಮಗೆ ಗೊತ್ತಿರುವ ಗಿರಾಕಿಗಳಿಗೆ ಮಾರಾಟ ಮಾಡುತ್ತಾ ಅಕ್ರಮವಾಗಿ ಹಣ ಗಳಿಸಿ ವಿಲಾಸಿ ಜೀವನ ನಡೆಸುತ್ತಾ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿರುವುದು ತಿಳಿದು ಬಂದಿರುತ್ತೆ.

ಈ ಕಾರ್ಯಾಚರಣೆಯನ್ನು ಜಂಟಿ ಪೊಲೀಸ್ ಆಯುಕ್ತ ಮತ್ತು ಉಪ ಪೊಲೀಸ್ ಆಯುಕ್ತ ಮಾರ್ಗದರ್ಶನದಲ್ಲಿ, ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಕೆ.ಸಿ.ಗೌತಮ್ ಅವರ ಮುಂದಾಳತ್ವದಲ್ಲಿ ಪೊಲೀಸ್ ಇನ್‍ಸ್ಪೆಕ್ಟರ್ ಜಿ.ಲಕ್ಷ್ಮಿಕಾಂತಯ್ಯ ಮತ್ತು ಸಿಬ್ಬಂದಿಗಳ ತಂಡ ಪಾಲ್ಗೊಂಡಿತ್ತು.

Leave a Reply

Your email address will not be published. Required fields are marked *