Saturday, 27th April 2024

ಕೆಎಸ್’ಆರ್’ಟಿಸಿ ಬಸ್-ಕಾರಿನ ನಡುವೆ ಅಪಘಾತ: ಇಬ್ಬರ ಸಾವು

ತುಮಕೂರು/ಗುಬ್ಬಿ: ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಚಿಕ್ಕನಾಯಕನಹಳ್ಳಿ ಮೂಲದ ಗಿರೀಶ್ ಹಾಗೂ ಮಾನ್ಯ ಎಂದು ಗುರ್ತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿ ರುವ ರಾಕೇಶ್ ಎಂಬುವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ತುಮಕೂರು ಕಡೆಯಿಂದ ಹೋಗುತ್ತಿದ್ದ ಬಸ್ ತಿಪಟೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!