Friday, 30th September 2022

ಬೆಂಗಳೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಆಂಬುಲೆನ್ಸ್ ಡಿಕ್ಕಿ, ಮೂರು ಮಂದಿ ಸಾವು

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಅಪಘಾತ ಮಾಸುವ ಮುನ್ನ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

5 ಗಂಟೆ ಸುಮಾರಿಗೆ ಹೊಸೂರು ರಸ್ತೆ ಅತ್ತಿಬೇಲಿ ಸಮೀಪದ ನೆರಳೂರು ಬಳಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ ಮೂಲದ ಆಂಬುಲೆನ್ಸ್ ಹೊಸೂರಿಗೆ ಹೋಗುತ್ತಿದ್ದ ವೇಳೆ ಎದುರಿಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.