Friday, 12th August 2022

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂರು ಮಂದಿ ಸಾವು

ಚಿತ್ರದುರ್ಗ: ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ತಂದೆ, ತಾಯಿ, ಮಗ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಘಟನೆ ನಡೆದಿದೆ.

ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ- ೪ರ ಗಣೇಶ ದೇವಸ್ಥಾನ ಬಳಿ ಸೋಮವಾರ ಬೆಳಗಿನ ಜಾವ ನಡೆದಿದ್ದು, ಜಯರಾಂ (28), ಸುಶೀಲಾ (26), ಪುತ್ರ ಆಕಾಶ್ (04) ಮೃತರು ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ರಾಜಸ್ಥಾನ ಮೂಲದವರಾಗಿದ್ದು, ರಾಜಸ್ಥಾನದಿಂದ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು ಕಡೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ರಾಜಾರಾಂ (28), ಕರ್ಣ (08) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಹಿರಿಯೂರು ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿದ್ದಾರೆ.