Wednesday, 29th June 2022

ಲಾರಿಗೆ ಇನ್ನೋವಾ ಕಾರು ಢಿಕ್ಕಿ: ಇಬ್ಬರ ಸಾವು

ಚಿತ್ರದುರ್ಗ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೀಬಾರ ಬಳಿ ನಿಧಾನವಾಗಿ ಚಲಿಸು ತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿಗಳಾದ ಶಿವರಾಮ್ (45 ವರ್ಷ) ಹಾಗೂ ಚೇತನ್ ಕುಮಾರ್ (30 ವರ್ಷ) ಎಂದು ಗುರುತಿಸಲಾಗಿದೆ. ಗಾಯಳು ಸ್ವಾಮಿ ಎಂಬುವವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸೀಬಾರ ಬಳಿ ದಾವಣ ಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಟಯರ್ ಪಂಕ್ಚರ್ ಆಗಿದ್ದ ಲಾರಿ ನಿಧಾನವಾಗಿ ಚಲಿಸುತ್ತಿತ್ತು. ಇದೇ ಸಮಯದಲ್ಲಿ ದಾವಣಗೆರೆ ಕಡೆಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ.

ಮೂರು ಜನ ಗೋವಾಕ್ಕೆ ಹೋಗಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಭೀಕರ ಅವಘಡ ಸಂಭವಿಸಿದೆ.  ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.