Tuesday, 27th October 2020

ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, 7 ಜನರ ಸಾವು

ಕಲಬುರಗಿ: ಜಿಲ್ಲೆಯಲ್ಲಿ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ತುಂಬು ಗರ್ಭಿಣಿ ಸೇರಿ 7 ಜನರು ಮೃತಪಟ್ಟಿದ್ದಾರೆ.

ಆಳಂದ ರಸ್ತೆಯ ಸಾವಳಗಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗರ್ಭಿಣಿಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆತರುತ್ತಿದ್ದಾಗ ದುರಂತ ಸಂಭವಿಸಿದೆ.

ಮೃತರನ್ನು ಗರ್ಭಿಣಿ ಇರ್ಫಾನಾ ಬೇಗಂ(25), ರುಚಿನಾ ಬೇಗಂ(50), ಅಬೇದಾಬಿ ಬೇಗಂ(50), ಮುನೀರ್(28), ಮಹಮ್ಮದ್(38), ಶೌಕತ್ ಅಲಿ(29) ಹಾಗೂ ಜಯಚುನಬಿ(60) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *