Friday, 24th September 2021

ವಕೀಲೆ ಅನಾರೋಗ್ಯ: ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಯುವತಿ ಪರ ವಾದ ಮಂಡಿಸುತ್ತಿದ್ದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅನಾರೋಗ್ಯಕ್ಕೀಡಾಗಿದ್ದು, ವಿಚಾರಣೆ ಮುಂದೂಡಲಾಗಿದೆ.

ಪ್ರಕರಣ ಸಂಬಂಧ ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಪೀಠದಲ್ಲಿ ವಿಚಾರಣೆ ನಡೆದಿದ್ದು, ಯುವತಿ ಪರ ಸುಪ್ರೀಂ ಕೋರ್ಟ್ ವಕೀಲೆ ಇಂದಿರಾ ಜೈಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಪರ ಸಿ.ವಿ.ನಾಗೇಶ್ ವಾದ ಮಂಡಿಸುತ್ತಿದ್ದರು. ಪ್ರಕರಣ ಸಂಬಂಧ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಎಸ್ ಐಟಿ ರಚನೆ ಕಾನೂನು ಬದ್ಧವಾಗಿಲ್ಲ ಎಂದು ಯುವತಿ ಪರ ವಕೀಲರು ವಾದ ಮಂಡಿಸಿದ್ದಾರೆ.

ಇದೇ ವೇಳೆ, ಅನಾರೋಗ್ಯದ ನಡುವೆಯೂ ವಾದ ಮಂಡಿಸಲು ಮುಂದಾಗಿದ್ದ ವಕೀಲೆ ಇಂದಿರಾ ಜೈಸಿಂಗ್ ಅವರ ಅನಾರೋಗ್ಯ ಪರಿಗಣಿಸಿದ ಹೈಕೋರ್ಟ್, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿ ಆದೇಶ ಹೊರಡಿಸಿತು.

Leave a Reply

Your email address will not be published. Required fields are marked *