Saturday, 10th April 2021

ನ್ಯಾಯಾಂಗ ನಿಂದನೆ ಪ್ರಕರಣ: ಗೊಗೊಯಿ ಪರ ಅಟಾರ್ನಿ ಜನರಲ್ ಬ್ಯಾಟಿಂಗ್‌

ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ ರಂಜನ್‌ ಗೊಗೊಯಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡದಿರಲು ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ ನಿರ್ಧರಿಸಿ ದ್ದಾರೆ.

ನ್ಯಾಯಾಂಗ ವ್ಯವಸ್ಥೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪವನ್ನು ನಿವೃತ್ತ ಸಿಜೆಐ ರಂಜನ್ ಗೊಗೊಯಿ ಎದುರಿಸುತ್ತಿದ್ದಾರೆ.

ದೇಶದ ನ್ಯಾಯಾಂಗ ವ್ಯವಸ್ಥೆಯೇ ಕುಸಿದಿದೆ. ವ್ಯಕ್ತಿಯೊಬ್ಬ ಕೋರ್ಟ್‌ ಮೆಟ್ಟಿಲೇರಿದಾಗ ಸಕಾಲದಲ್ಲಿ ತೀರ್ಪು ಹೊರಬೀಳುವ ಸಾಧ್ಯತೆ ಕಡಿಮೆ ಎಂಬುದಾಗಿ ನಿವೃತ್ತ ಸಿಜೆಐ ಗೊಗೊಯಿ ಹೇಳಿದ್ದರು. ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಬೇಕು’ ಎಂದು ಕೋರಿ ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಎಂಬವರು ಅರ್ಜಿ ಸಲ್ಲಿಸಿದ್ದರು.

ಗೊಗೊಯಿ ಸಂದರ್ಶನವನ್ನು ವೀಕ್ಷಿಸಿದ್ದೇನೆ. ನ್ಯಾಯಾಂಗ ವ್ಯವಸ್ಥೆ ಕುರಿತು ಅವರು ವ್ಯಕ್ತಪಡಿಸಿರುವ ಅಭಿಪ್ರಾಯಗಳು ನ್ಯಾಯಾಲಯದ ಘನತೆ ಕುಂದಿಸುವ ರೀತಿಯಲ್ಲಿರಲಿಲ್ಲ. ಹೀಗಾಗಿ, ಗೊಗೊಯಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ವೇಣುಗೋಪಾಲ ಅವರು ಗೋಖಲೆ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *