Friday, 27th May 2022

ಮುಂಬೈನಲ್ಲಿ ನಿರ್ಭಯಾ ಪ್ರಕರಣವೊಂದು ಬೆಚ್ಚಿ ಬೀಳಿಸುತ್ತೆ…!

ಮುಂಬೈ: ಮುಂಬೈನಲ್ಲಿ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಭಯಾನಕ ಘಟನೆ ಸಂಭವಿಸಿದೆ.

ಕಾಮುಕ ಮಹಿಳೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್​​ನ್ನು ತುರುಕಿ ವಿಕೃತಿ ಮೆರೆದಿದ್ದಾರೆ. 30 ವರ್ಷದ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಆಕೆಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ತುರುಕಿದ್ದಾನೆ. ಸಂತ್ರಸ್ತೆಯ ಸ್ಥಿತಿ  ಗಂಭೀರ ವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮುಂಬೈನ ಸಕಿ ನಕ ಪ್ರದೇಶದ ಖೈರಾನಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಕಂಟ್ರೋಲ್​ ರೂಮ್​ಗೆ ಮಧ್ಯರಾತ್ರಿ 3.30ಕ್ಕೆ ಫೋನ್ ಕರೆಯೊಂದು ಬಂತು. ”ಸಕಿ ನಕ ಪ್ರದೇಶದ ಖೈರಾನಿ ರಸ್ತೆಯಲ್ಲಿ ಮಹಿಳೆ ಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ” ಎಂದು ಅನಾಮಿಕ ಕರೆ ಹೇಳಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಘಟ್ಕೋಪರ್​ನ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದರು. ಮಹಿಳೆಯ ಸ್ಥಿತಿ ತೀರಾ ಗಂಭೀರ ವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಬಂಧಿತನನ್ನು 42 ವರ್ಷದ ಮೋಹನ್ ಚೌಹಾಣ್ ಎಂದು ಗುರುತಿಸ ಲಾಗಿದೆ.

2012ರಲ್ಲಿ ಡಿಸೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಮುಕರ ಗುಂಪೊಂದು ಚಲಿಸು ತ್ತಿದ್ದ ಬಸ್​​ನಲ್ಲಿ ಯುವತಿಯನ್ನು ಬಹಳ ಕ್ರೂರವಾಗಿ ಅತ್ಯಾಚಾರ ಮಾಡಿತ್ತು. ಬಹಳ ದಿನಗಳವರೆಗೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಕೊನೆಗೆ ಮೃತಪಟ್ಟಿದ್ದಳು.