Friday, 27th May 2022

1200 ಕೋಟಿ ರೂ.ಗಳ ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಲಿದೆ ಶಿರಾಡಿ ಘಾಟ್

ಬೆಂಗಳೂರು: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿ ಸುವುದಾಗಿ ತಿಳಿಸಿದ್ದಾರೆ.

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ.

ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 75ನ್ನು ಮತ್ತೆ ಬಂದ್ ಮಾಡಲು ಹಾಸನ ಜಿಲ್ಲಾಡಳಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಮಾಡಿದೆ. ಹತ್ತು ಕಿಮೀ ರಸ್ತೆ ನಿರ್ಮಾಣಕ್ಕಾಗಿ ಆರು ತಿಂಗಳು ಹಾಗು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಗುತ್ತಿಗೆ ವಹಿಸಿಕೊಂಡ ರಾಜ್ ಕಮಲ್ ಕಂಪೆನಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.