Friday, 5th March 2021

ರಾಜ್ಯ ಬಿಜೆಪಿ ಉಪಾಧ್ಯಕ್ಷ ಹುದ್ದೆಗೆ ಅರವಿಂದ ಲಿಂಬಾವಳಿ ರಾಜೀನಾಮೆ

ಬೆಂಗಳೂರು : ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅವಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇನ್ನು ಇತ್ತೀಚೆಗಷ್ಟೇ  ಸಿಟಿ ರವಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾ ಗಿತ್ತು.

Leave a Reply

Your email address will not be published. Required fields are marked *