ಚಿತ್ರದುರ್ಗ: ರಾಜಕೀಯ ಜೀವನದಲ್ಲಿ ಅನೇಕ ಸವಾಲು ಎದುರಿಸಿದ್ದೇನೆ. ರಾಜನಾದ ಸತ್ಯ ಹರಿಶ್ಚಂದ್ರ ಸ್ಮಶಾನ ಕೆಲಸದಲ್ಲೂ ಸೈ ಎನಿಸಿಕೊಂಡಿದ್ದಾನೆ. ನಾವು ಸಹ ಸಾರಿಗೆ ಇಲಾಖೆಯಲ್ಲೂ ಸೈ ಎನ್ನಿಸಿಕೊಳ್ಳುತ್ತೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಹರಿಶ್ಚಂದ್ರ ಕಥೆಗೆ ಹೋಲಿಕೆ ಮಾಡಿದರು.
ಖಾತೆ ಬದಲಾವಣೆ ಬಗ್ಗೆ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ. ಸರ್ಕಾರದಲ್ಲಿ ಕೆಲಸ ಮಾಡುವ ಸಮಾ ಧಾನವಿದೆ. ಸಾರಿಗೆ ಇಲಾಖೆ ನಷ್ಟದಲ್ಲಿದ್ದು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದರು. ರಾಜಕಾರಣದಲ್ಲಿ ಏನೇ ಬಂದರೂ ಸವಾಲು ಸ್ವೀಕರಿಸುತ್ತೇನೆ. ಪ್ರಧಾನಿ ಮೋದಿ ಜೊತೆ ಕೆಲಸ ಮಾಡುವುದೆ ಸಂತೋಷ, ಸಮಾಧಾನ ಎಂದರು.
ಶೇ.18-20ರಷ್ಟು ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ವಿಚಾರವಾಗಿ ಮಾತನಾಡಿದ ಅವರು, ನಾನು ಸಾರಿಗೆ ಇಲಾಖೆ ಬಗ್ಗೆ ಇನ್ನೂ ಅಧ್ಯಯನ ಮಾಡುತ್ತಿದ್ದೇನೆ.
ನಾಳೆ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದೇನೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಮಾಡುತ್ತೇವೆ. ಜನರಿಗೆ ಹೊರೆ ಆಗಲು ಬಿಡುವುದಿಲ್ಲ ಎಂದರು.