Wednesday, 21st October 2020

ಕರ್ನಾಟಕ ಬಂದ್: ಬೆಂಗಳೂರು ವಿವಿ ಪರೀಕ್ಷೆಗಳ ಮುಂದೂಡಿಕೆ

ಬೆಂಗಳೂರು : ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ, ಸೋಮವಾರ (ಸೆ.೨೮) ರೈತ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡಿವೆ.

ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಾಳೆ ನಡೆಯಬೇಕಿದ್ದಂತ ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪರೀಕ್ಷೆಗಳನ್ನು ಮುಂದೂಡಿದೆ.

ಈ ಕುರಿತಂತೆ, ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ದೇವರಾಜ್ ಮಾಹಿತಿ ನೀಡಿದ್ದು, ನಾಳೆ ಕರ್ನಾಟಕ ಬಂದ್ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದಂತ ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿವಿ ಪರೀಕ್ಷೆ ಮುಂದೂಡಿಕೆ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *