Friday, 27th May 2022

ಬಾಂಗ್ಲಾ ಯುವತಿಯ ಅತ್ಯಾಚಾರ: ವಿಕೃತಕಾಮಿಗಳ ಬಂಧನ

ಬೆಂಗಳೂರು: ಯುವತಿಯೋರ್ವಳನ್ನು ಅತ್ಯಾಚಾರ ಮಾಡಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರವೆಸಗಿ ಯುವತಿಯ ಮರ್ಮಾಂಗಕ್ಕೆ ಮದ್ಯದ ಬಾಟಲ್​ ಇಟ್ಟು, ಅದನ್ನೆಲ್ಲ ವಿಡಿಯೋ ಮಾಡಿದ್ದ ಯುವಕರ ಗ್ಯಾಂಗ್​ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಮಾರು 10 ದಿನಗಳ ಹಿಂದೆ ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ಈ ಘಟನೆ ನಡೆದಿದೆ. ಸಂತ್ರಸ್ಥೆ ಮತ್ತು ಆರೋಪಿ ಗಳು ಬಾಂಗ್ಲಾದೇಶದ ಮೂಲದವರು. ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ರಾಮ ಮೂರ್ತಿ ನಗರದ ಎನ್ ಆರ್ ಐ ಕಾಲೋನಿಯಲ್ಲಿ ವಾಸವಾಗಿದ್ದರು. ಅಲ್ಲಿಯೇ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರ ಯುವಕರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಲೈಂಗಿಕ ಮತ್ತು ದೈಹಿಕ ದೌರ್ಜನ್ಯ ಎಸಗಿ ಅದನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದರು. ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯ ಗಳಲ್ಲಿ ಆ ವಿಡಿಯೋ ವೈರಲ್ ಆಗಿತ್ತು. ಆರೋಪಿಗಳೆಲ್ಲರೂ ಸಂತ್ರಸ್ತೆಗೆ ಪರಿಚಯಸ್ಥರೇ ಎನ್ನಲಾಗಿದೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿ ದ್ದಾರೆ. ಬಾಂಗ್ಲಾ ಮೂಲದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹೈದರಾಬಾದ್​ ಮೂಲದ ಹಕೀಲ್​ನನ್ನು ವಶಕ್ಕೆ ಪಡೆಯಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದು ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.