Tuesday, 5th July 2022

ಬಸವರಾಜ ಬೊಮ್ಮಾಯಿ ಸಾಧನೆ ಕುರಿತು ಕಿರು ಹೊತ್ತಿಗೆ ಬಿಡುಗಡೆ

ಹುಬ್ಬಳ್ಳಿ: ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಭಾರತೀಯ ಜನತಾ ಪಕ್ಷದ ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಯಾದ  ಎಸ್ ವಿ ಸಂಕನೂರವರ ಚುನಾವಣಾ ಪ್ರಚಾರದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ರವರ ಸಾಧನೆಯ ಕುರಿತು ಕಿರು ಹೊತ್ತಿಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಹಾವೇರಿ ಜಿಲ್ಲೆಯ ಬಿಜೆಪಿ ಪಕ್ಷದ ಅಧ್ಯಕ್ಷರು, ಜಿಲ್ಲೆಯ ಸಂಸದರು, ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ವಿವಿಧ ಮುಖಂಡರು ಹಾಗೂ ಪದಾಧಿಕಾರಿಗಳು ಮತ್ತು ಅಪಾರ ಕಾರ್ಯಕರ್ತರು ಹಾಜರಿದ್ದರು.