Wednesday, 5th October 2022

ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ. ಮೋಹನ್

ಬೆಂಗಳೂರು : ದರ್ಶನ್ ಅವರ ವ್ಯಕ್ತಿತ್ವದ ಕುರಿತು ಹೇಳುವ ಮೂಲಕ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ.

ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಲಾ ಸೇವೆ ಸಲ್ಲಿಸುತ್ತಿರುವ ದರ್ಶನ್ ತುಗೂದೀಪ ನನಗೆ ಆತ್ಮೀಯರು. ಚಾಲೆಂಜಿಂಗ್ ಸ್ಟಾರ್ ಯಾರೇ ಕಷ್ಟ ಎಂದರೂ ಸಹಾಯಕ್ಕೆ ನಿಲ್ಲುತ್ತಾರೆ. ರೈತರ ಹೋರಾಟ, ರೈತರ – ಕಲಾವಿದರ ಕಷ್ಟ, ಪ್ರಾಣಿಗಳ ಸಂಕಷ್ಟ ಬಂದಾಗ ಒಂದು ಹೆಜ್ಜೆ ಮುಂದೆ ಬರುವುದು ದರ್ಶನ್ ಎಂದು ಕರ್ನಾಟಕಕ್ಕೇ ತಿಳಿದಿದೆ ಎಂದಿದ್ದಾರೆ.

ಹಲ್ಲೆ ಆರೋಪದ ಕುರಿತು ಮಾತಾಡಿ, ಯಾವುದೇ ಆಧಾರವಿಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಅನಗತ್ಯ ಆರೋಪ ಮಾಡಿ , ಅವರ ತೇಜೋ ವಧೆಗೆ ಯತ್ನಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ. ವಾಣಿಜ್ಯ ಮಂಡಳಿ ಮಧ್ಯ ಪ್ರವೇಶಿಸಿ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.