Friday, 27th May 2022

ಮೇಟಿ ವಿರುದ್ಧ ಕೇಸ್ ಕೂಡ ದಾಖಲಾಗಿರಲಿಲ್ಲ: ಸಿದ್ದುಗೆ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ ಶಕ್ತಿ ಕಡಿಮೆ ಆಗಿದೆ. ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿ ದ್ದರು. ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ನಾವು ಯುವತಿ ದೂರು ಕೊಟ್ಟ ಬಳಿಕ ಎಫ್ ಐಆರ್ ದಾಖಲಿಸಿದ್ದೇವೆ. ಅನಗತ್ಯ ಹೇಳಿಕೆಗಳನ್ನು ನೀಡಿ ಪೊಲೀಸರಿಗೆ ಧೈರ್ಯ ಕುಗ್ಗಿಸುವ ಕೆಲಸ ಮಾಡುವುದು ಬೇಡ ಎಂದರು.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಆಡಿಯೋ, ವೀಡಿಯೋ, ಸಿಡಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನು ಯುವತಿಗೆ ವಿಚಾರಣೆಗೆ ಹಾಜರಾಗುವಂತೆ 5 ಬಾರಿ ನೋಟೀಸ್ ನೀಡಲಾಗಿದೆ. ರಕ್ಷಣೆ ನಿಡುವುದಾಗಿಯೂ ಹೇಳಿದ್ದೇವೆ. ಆಕೆಯ ಪೋಷಕರಿಗೆ ಈಗಾಗಲೇ ರಕ್ಷಣೆ ನಿಡಿದ್ದೇವೆ. ಹಾಗಾಗಿ ಯುವತಿ ಬಂದು ಹೇಳಿಕೆಗಳನ್ನು ದಾಖಲಿಸಲಿ ಎಂದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily