Friday, 27th May 2022

ಬಸ್-ಲಾರಿ ನಡುವೆ ಅಪಘಾತ: ಮಾವು ತುಂಬಿದ್ದ ಲಾರಿ ಪಲ್ಟಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮಂಗಳವಾರ ಮಧ್ಯರಾತ್ರಿ 12.10ರ ಸುಮಾರಿಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.

ಮಾವಿನ ಕಾಯಿ ತುಂಬಿಕೊಂಡು ಚಲಿಸುತ್ತಿದ್ದ ಮಹಾರಾಷ್ಟ್ರ ನೊಂದಾಯಿತ ಲಾರಿಗೆ ಹಿಂಬದಿಯಲ್ಲಿ ಬಂದ ಗೋವಾದ ಬಸ್ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಖಾಸಗಿ ಬಸ್ ನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು ಲಾರಿ ಕ್ಲೀನರ್ ಕಾಲಿಗೆ ಗಾಯವಾಗಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ.