Sunday, 24th January 2021

ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಸೇರಿದ ಪರಮಾಧಿಕಾರ

ತುಮಕೂರು: ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಸೇರಿದ ಪರಮಾಧಿಕಾರ ಎಂದು ಡಿಸಿಎಂ ಡಿಸಿಎಂ ಅಶ್ವತ್ ನಾರಾಯಣ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯ ಸಿಗುವಂತೆ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಕ್ರಮ ಕೈಗೊಳ್ಳುತ್ತಾರೆ ಎಂದರು. ಬೇರೆ ಪಕ್ಷ ತೊರೆದು ಬಿಜೆಪಿಗೆ ಬಂದವರಿಗೆ ಖಂಡಿತ ತೃಪ್ತಿಯಾಗಲಿದೆ. ನಮ್ಮ ಪಕ್ಷದಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ಈ ಕುರಿತು ಸಿಎಂ ಸಂಪೂರ್ಣ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಡಿಸಿಎಂ ಲಕ್ಷ್ಮಣ್ ಸವದಿ ಮಾತನಾಡಿ, ಸಚಿವ ಸಂಪುಟಕ್ಕೆ ಗೊತ್ತಾಗುತ್ತೆ ಯಾರನ್ನ ತಗೋತಾರೋ ಬಿಡ್ತಾರೋ ಅಂತ ಬುಧವಾರ ಗೊತ್ತಾಗಲಿದೆ. ವಿಸ್ತರಣೆಯಲ್ಲಿ ಸಮಾಆನತೆಯ ಪಾಲು ಸಿಗಲಿದೆ. ಯಾರೂ ಸಹ ಬೇಸರಗೊಳ್ಳುವ ಅವಶ್ಯಕತೆ ಇಲ್ಲ ಎಂದರು.
ಸಚಿವ ಶ್ರೀರಾಮುಲು ಮಾತನಾಡಿ, 7 ಮಂದಿಗೆ ಸಚಿವ ಸ್ಥಾನದ ಅವಕಾಶ ಕೊಡ್ತಿವಿ ಅಂತ ಸಿಎಂ ಹೇಳಿದ್ದಾರೆ. 7 ಮಂದಿಯಲ್ಲಿ ಇಂತವರಿಗೆ ಅವಕಾಶ ಕೊಡಬೇಕು ಎಂದು ಪಾರ್ಟಿ ತೀರ್ಮಾನಕ್ಕೆ ಬರ್ತಿದೆ ಎಂದರು.

ಮತ್ತೊಮ್ಮೆ ಸಿಎಂ ಜೊತೆ ಚರ್ಚೆ ಮಾಡ್ತೇವೆ. ಯಾರಿಗೆ ಕೊಡಬೇಕು ಎಂಬುದು ಸಿಎಂ ಹಾಗೂ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ. ನಮ್ಮ ಪಾರ್ಟಿಗೆ ಅಧಿಕಾರಕ್ಕೆ ತಂದವರಿಗೆ ಅವಕಾಶ ನೀಡಬೇಕಾಗುತ್ತದೆ. ನಮ್ಮ ಪಾರ್ಟಿಯಲ್ಲಿರುವ ಸಿನಿಯರ್ ಲೀಡರ್ ಗಳು ಅವಕಾಶ ಮಾಡಿಕೊಡಬೇಕಾಗುತ್ತದೆ. ಹಾಗಾಗಿ ಅವರು ಅವಕಾಶ ಮಾಡಿಕೊಡುವ ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೃಹಸಚಿವ ಬೊಮ್ಮಾಯಿ, ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು, ವಿಪ ಸದಸ್ಯ ನಾರಾಯಣಸ್ವಾಮಿ, ಶಾಸಕರಾದ ಜ್ಯೋತಿಗಣೇಶ್, ಮಸಾಲೆ ಜಯರಾಮ್ ಇತರರಿದ್ದರು.

Leave a Reply

Your email address will not be published. Required fields are marked *