Tuesday, 15th October 2019

ಐಎಂಎ: ‘ಹೈ’ಗೆ ತನಿಖಾ ವರದಿ ಸಲ್ಲಿಸಿದ ಸಿಬಿಐ

ಐಎಂಎ ಬಹುಕೋಟಿ ವಂಚನೆ ಪ್ರಕರಣ ವಿಚಾರಕ್ಕೆೆ ಸಂಬಂಧಿಸಿದಂತೆ ಇದುವರೆಗಿನ ತನಿಖೆಯ ವರದಿಯನ್ನು ಸಿಬಿಐ ಅಧಿಕಾರಿಗಳು ಸೋಮವಾರ ಹೈಕೋರ್ಟ್‌ಗೆ ಸಲ್ಲಿಸಿದರು.

ವಂಚನೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಲು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಿ ಅರ್ಜಿಗಳನ್ನು ಮುಖ್ಯ ನ್ಯಾಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲರು, ಐಎಂಎ ಹಗರಣದಲ್ಲಿ ರಾಜಕಾರಣಿಯೊಬ್ಬರು 10 ಕೋಟಿ ರು. ಕೇಳಿದ್ದಾರೆಂದು ಆರೋಪಿಸಲಾಗಿದೆ. ರಾಜ್ಯಪಾಲರೇ ಪತ್ರ ಬರೆದು ಆ ರಾಜಕಾರಣಿಯನ್ನು ರಕ್ಷಿಸಲು ಸೂಚಿಸಿದ್ದಾರೆ. ಇಬ್ಬರು ಅಧಿಕಾರಿಗಳನ್ನು ಮಾತ್ರ ಬಂಧಿಸಿದ್ದು, ಉಳಿದವರ ವಿರುದ್ಧ ಎಸ್ಐಟಿ, ಸಿಬಿಐ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸಿಬಿಐ ಪರ ವಕೀಲ ಪಿ. ಪ್ರಸನ್ನ ಕುಮಾರ್ ಅವರು ವಾದಿಸಿ, ಸರಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್‌ಶೀಟ್‌ಗೆ ಪೂರ್ವಾನುಮತಿ ಬೇಕು. ಈಗಾಗಲೇ ಅನುಮತಿ ಕೋರಿ ಸರಕಾರಕ್ಕೆೆ ಮನವಿ ಸಲ್ಲಿಸಿದ್ದೇವೆ ಎಂದು ವಿವರಿಸಿದರು. ಇದಕ್ಕೆೆ ಪ್ರತಿಕ್ರಿಿಯಿಸಿದ ಪೀಠ, ಸಿಬಿಐ ಸಲ್ಲಿಸಿರುವ ತನಿಖಾ ಪ್ರಗತಿ ವರದಿ ಗಮನಿಸಿದ್ದೇವೆ. ಮೇಲ್ನೋೋಟಕ್ಕೆೆ ತನಿಖೆ ಸಮರ್ಥವಾಗಿ ನಡೆಯುತ್ತಿಿರುವಂತೆ ಕಾಣುತ್ತಿಿದೆ. ಅ.18ರೊಳಗೆ ಮತ್ತೊೊಂದು ತನಿಖಾ ಪ್ರಗತಿ ವರದಿ ಸಲ್ಲಿಸಬೇಕು. ಅಗತ್ಯವಿದ್ದಲ್ಲಿ ರಾಜ್ಯ ಸರಕಾರ ನೇಮಿಸುವ ಲೆಕ್ಕ ಪರಿಶೋಧಕರ ಸೇವೆಯನ್ನು ಸಿಬಿಐ ಬಳಸಿಕೊಳ್ಳಬಹುದು ಎಂದು ಸೂಚಿಸಿ, ವಿಚಾರಣೆ ಮುಂದೂಡಿತು.

Leave a Reply

Your email address will not be published. Required fields are marked *