Friday, 21st June 2024

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.

ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿಯರಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದೆ. ಈ ತೀರ್ಪು ಕಾಯ್ದಿರಿಸಿದ್ದು,  ಮಂಗಳವಾರ ಮಧ್ಯಾಹ್ನ ನ್ಯಾ.ಶ್ರೀನಿವಾಸ್​ ಹರೀಶ್​ ಕುಮಾರ್​ ಅವರ ನ್ನೊಳಗೊಂಡ ಏಕಸದಸ್ಯ ನ್ಯಾಯಪೀಠ ತೀರ್ಪು ನೀಡಿದೆ. ಹೀಗಾಗಿ, ನಟಿಮಣಿಯರಿಬ್ಬರೂ ಇನ್ನಷ್ಟು ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ.

 

Leave a Reply

Your email address will not be published. Required fields are marked *

error: Content is protected !!