Friday, 1st December 2023

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ರಾಕಿಂಗ್ ಸ್ಟಾರ್’ ಯಶ್

ಬೆಂಗಳೂರು: ಕೆಜಿಎಫ್‌ ಸಿನಿಮಾ ಮೂಲಕ ಭಾರತಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿ ರುವ ನಟ ‘ರಾಕಿಂಗ್ ಸ್ಟಾರ್’ ಯಶ್ ಅವರಿಗೆ ಇಂದು (ಜ.8) 36ನೇ ವರ್ಷದ ಜನ್ಮದಿನ ಸಂಭ್ರಮ.

ಹಾಸನ ಜಿಲ್ಲೆಯ ಭುವನಹಳ್ಳಿಯಲ್ಲಿ ಜನಿಸಿದ ಯಶ್ ಅವರ ಮೊದಲ ಹೆಸರು ನವೀನ್ ಕುಮಾರ್ ಗೌಡ. ಮೊದಲು ಧಾರವಾಹಿಗಳಲ್ಲಿ ಗುರುತಿಸಿಕೊಂಡು ನಂತರ ಕನ್ನಡ ಚಿತ್ರರಂಗದಲ್ಲಿ ಮಿಂಚಿ ‘ಯಶ್‌’ ಆದರು. ಕೆಜಿಎಫ್ ಚಾಫ್ಟರ್ 1 ಮೂಲಕ ಅವರು ಇಡೀ ಭಾರತೀಯ ಚಿತ್ರರಂಗದ ಸ್ಟಾರ್ ನಟ ಎನಿಸಿಕೊಂಡಿದ್ದಾರೆ.

ಕರೋನಾಕ್ಕೂ ಮುನ್ನ ಯಶ್‌ ಅಭಿಮಾನಿಗಳು ಅದ್ಧೂರಿಯಾಗಿ ಅವರ ಹುಟ್ಟುಹಬ್ಬ ಆಚರಿಸಿದ್ದರು. ಆದರೆ ಕಳೆದ ವರ್ಷ ಸಾರ್ವಜನಿಕವಾಗಿ ಆಚರಿಸಲು ಅಭಿಮಾನಿಗಳಿಗೆ ಅವಕಾಶ ಸಿಕ್ಕಿಲ್ಲ. ಕರೋನಾ ಹಿನ್ನೆಲೆಯಲ್ಲಿ ಯಶ್ ಅವರು ದೂರದಿಂದಲೇ ಶುಭಾಶಯ ತಿಳಿಸಿ ಎಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳು ಶುಭಾಶಯಗಳನ್ನು ಹೇಳುತ್ತಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಯಶ್‌ ಅಭಿಮಾನಿಗಳು ಸಾರ್ವ ಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಅಭಿಮಾನಿಗಳು ಮತ್ತು ಚಿತ್ರರಂಗ ಗಣ್ಯರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

 

error: Content is protected !!