Friday, 25th October 2024

ರಿಯಾ ಚಕ್ರವರ್ತಿಗಿಲ್ಲ ಬೇಲ್‌, ಬಂಧನ ಅವಧಿ ವಿಸ್ತರಣೆ

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಸಿಂಗ್ ರಾಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಹಾಗೂ ಆಕೆ ಸಹೋದರ ಶೋವಿಕ್ ಚಕ್ರವರ್ತಿ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ರಿಯಾ ಚಕ್ರವರ್ತಿ ಹಾಗೂ ಆಕೆ ಸಹೋದರನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕಳೆದ ಸೆ.22ರಂದು ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎನ್ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಆದರೆ ಇಬ್ಬರಿಗೂ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ನೀಡಿತ್ತು.

ಇದೀಗ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20ರವರೆಗೆ ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಡ್ರಗ್ಸ್ ಜಾಲದ ನಂಟಿನ ತಿರುವು ಪಡೆದು ಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಹಾಗೂ ಆಕೆ ಸಹೋದರ ಶೋವಿಕ್ ನನ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದರು.