Friday, 2nd June 2023

ಬಾಲಿವುಡ್‌ ಸ್ಟಾರ್ ಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ ಕರೆ

ಮುಂಬೈ: ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ ಒಡ್ಡಿದ್ದಾರೆ.

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಸಲ್ಮಾನ್ ಖಾನ್ ಖಾನ್ ಖಾನ್‌ಗೆ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ.

ಬೆದರಿಕೆ ಹಿನ್ನೆಲೆಯಲ್ಲಿ ಒಮ್ಮೆಲೆ ಬೆಚ್ಚಿಬಿದ್ದ ಸಲ್ಮಾನ್ ಖಾನ್ ಟೀಂ ಈ ಬಗ್ಗೆ ಮುಂಬೈನ ಬಾಂದ್ರಾ ಪೊಲೀಸರಿಗೆ ದೂರು ನೀಡಿರುವುದಾಗಿ ಹೇಳಲಾಗ್ತಿದೆ. ಗ್ಯಾಂಗ್‌ಸ್ಟರ್‌ಗಳಾದ ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್‌ ವಿರುದ್ಧ ಮುಂಬೈ ಪೊಲೀಸರ ಮತ್ತೊಮ್ಮೆ ಕೇಸ್ ದಾಖಲಿಸಿಕೊಂಡಿ ದ್ದಾರೆ.

ಒಮ್ಮೆ ಸಲ್ಮಾನ್ ಖಾನ್ ಹತ್ಯೆಗೂ ಬಿಷ್ಣೋಯ್ ಗ್ಯಾಂಗ್ ಪ್ರಯತ್ನಿಸಿತ್ತು. ಈ ಬಾರಿ ಬೆದರಿಕೆ ವೇಳೆ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ ಜೊತೆ ಮಾತಾನಾಡಬೇಕಿದೆ ಎಂದು ಮೇಲ್ ಮಾಡಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಲ್ಮಾನ್ ಖಾನ್ ಟೀಂ ಹೇಳಿದೆ.

ಗಾಯಕ ಸಿಧು ಮೂಸೆವಾಲಾ ಹತ್ಯೆ ಕೇಸ್‌ನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಪಾತಕಿ ಲಾರೆನ್ಸ್‌ ಬಿಷ್ಣೊಯ್‌, ಸಲ್ಮಾನ್‌ ಖಾನ್‌ಗೆ ಬೆದರಿಕೆ ಒಡ್ಡುತ್ತಿರುವುದು ಇದೇ ಮೊದಲಲ್ಲ. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಲ್ಮಾನ್‌ ಖಾನ್‌ ಹತ್ಯೆ ಮಾಡುವುದಾಗಿ 2018ರಲ್ಲಿ ಕೋರ್ಟ್ ಆವರಣದಲ್ಲಿ ಲಾರೆನ್ಸ್‌ ಬಿಷ್ಣೊಯ್‌ ಎಚ್ಚರಿಕೆ ನೀಡಿದ್ದ.

error: Content is protected !!