Saturday, 30th September 2023

ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ

ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ.

ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ.

2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಾಧಾರವಿಲ್ಲ ಎಂದು ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಶ್ರುತಿ ಹರಿಹರನ್ ಪ್ರಶ್ನಿಸಿ ದ್ದರು.

ಈ ಹಿನ್ನೆಲೆಯಲ್ಲಿ ಪ್ರಕರಣ ಮತ್ತೆ ಸುದ್ದಿಯಲ್ಲಿದ್ದು, ಶ್ರತಿ ಹರಿಹರನ್ ಹಾಗೂ ಪೊಲೀಸರಿಗೆ ಕೋರ್ಟ್ ನೋಟೀಸ್ ನೀಡಿದೆ.

error: Content is protected !!