Saturday, 20th April 2024

ದಿ ಕೇರಳ ಸ್ಟೋರಿ: 156 ಕೋಟಿ ರೂಪಾಯಿ ಕಲೆಕ್ಷನ್

ತಿರುವನಂತಪುರಂ: ದಿ ಕೇರಳ ಸ್ಟೋರಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ದೇಶದ ಅನೇಕ ಕಡೆಗಳಲ್ಲಿ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದ್ದು ಇದುವರೆಗೂ 156 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸುದೀಪ್ತೋ ಸೇನ್ ನಿರ್ದೇಶನದ ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಟಿ ಅದಾ ಶರ್ಮಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಪ್ರತಿ ದಿನವೂ ಈ ಚಿತ್ರ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ಸದ್ಯ 156 ಕೋಟಿ ರೂಪಾಯಿ ಮಾಡಿರುವ ಈ ಚಿತ್ರದ ಮುಂದಿರುವ ಟಾರ್ಗೆಟ್​ 200 ಕೋಟಿ ರೂಪಾಯಿ!

‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್​ವಾಶ್​​ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾ ರೆ.

ನಿರ್ದೇಶಕ ಸುದೀಪ್ತೋ ಸೇನ್​ ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗ ರನ್ನು ಬ್ರೇನ್​ವಾಶ್​ ಮಾಡಿದ್ದರ ಕುರಿತು ಸೀಕ್ವೆಲ್​ ಮಾಡುವಂತೆ ಅವರಿಗೆ ಆಫರ್​ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

error: Content is protected !!