Tuesday, 26th October 2021

ಇಂದು, ನಾಳೆ ಸಿಎಂ ಚಾಮರಾಜನಗರ ಜಿಲ್ಲೆ ಟೂರ್‌

ಮಲೆ ಮಹದೇಶ್ವರನ ದರ್ಶನ

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನ.25 ಮತ್ತು 26 ರಂದು ಚಾಮರಾಜನಗರ ಜಿಲ್ಲಾ  ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಮಲೆ ಮಹದೇಶ್ವರನ ದರ್ಶನ ಪಡೆಯಲಿದ್ದಾರೆ.

ಸಂಜೆ 5 ಗಂಟೆಗೆ ಮೈಸೂರಿನಿಂದ ಹೆಲಿಕಾಫ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ, ಅಧಿಕಾರಿಗಳೊಂದಿಗೆ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಬಳಿಕ ಬೆಟ್ಟದಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಯಡಿಯೂರಪ್ಪ, ನ.೨೬ರಂದು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿ ಅವರೊಂದಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಸೇರಿದಂತೆ ಹಲವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.

ಬೆಟ್ಟದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಗುರುವಾರ ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಹಿಂದಿ ರುಗಲಿದ್ದಾರೆ.

Leave a Reply

Your email address will not be published. Required fields are marked *