Friday, 27th May 2022

ಕರೋನಾ ಭೀತಿ: ನಾಳೆ ಸಂಜೆ ಸಭೆ

Basavaraj Bommai

ಬೆಂಗಳೂರು : ರಾಜ್ಯದಲ್ಲಿ ಕರೋನಾ ಸೋಂಕು ಶರವೇಗದಲ್ಲಿ ಹರಡುತ್ತಿರುವ ಹಿನ್ನೆಲೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿಎಂ ಬೊಮ್ಮಾಯಿ ಜ.೧೭ರಂದು ನಾಳೆ ಸಂಜೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದ್ದು, ಸಭೆಯಲ್ಲಿ ಸಚಿವರಾದ ಡಾ.ಕೆ ಸುಧಾಕರ್‌ ಹಾಗೂ ಆರ್‌. ಅಶೋಕ್‌, ಕೋವಿಡ್‌ 19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದಲ್ಲಿ ಸಧ್ಯ ವಿಧಿಸಿರುವ ಕಠಿಣ ರೂಲ್ಸ್‌ ಜ.19ಕ್ಕೆ ಅಂತ್ಯವಾಗಲಿದ್ದು, ಈ ಕಠಿಣ ರೂಲ್ಸ್‌ ಮುಂದುವರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು.