Monday, 26th October 2020

ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆ ಬೇಡ: ಹೆಚ್.ಡಿ.ಕೆ

ಬೆಂಗಳೂರು : ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ನ ಅವಕಾಶವನ್ನು ಯಾರೂ ಮುಂದಿಡು ವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ ಎಂಬುದಾಗಿ ಜೆಡಿಎಸ್ ವರಿಷ್ಠ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿ ದ್ದಾರೆ.

ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ,ಮಹಾರಾಷ್ಟ್ರದಲ್ಲಿ ಸರ್ಕಾರ ವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ.

Leave a Reply

Your email address will not be published. Required fields are marked *