Friday, 27th May 2022

ಕರಾವಳಿ ಸಂಪೂರ್ಣ ದೇಶದ್ರೋಹಿಗಳ ಆಡಂಬರವಾಗುತ್ತಿದೆ: ಸಂಸದ ಅನಂತಕುಮಾರ್ ಹೆಗಡೆ

ಶಿರಸಿ: ಇಲ್ಲಿನ ಅಭಿವೃದ್ಧಿಯ ಲಾಭವನ್ಮು ದೇಶದ್ರೋಹಿಗಳು ಪಡೆದುಕೊಳ್ಳುತ್ತಾರೆ, ಮಂಗಳೂರು ಸಂಪೂರ್ಣ ನಮ್ಮ ಕೈ ತಪ್ಪಿ ಹೋಗುತ್ತಿದೆ, ಕರಾವಳಿ ಸಂಪೂರ್ಣ ದೇಶ ದ್ರೋಹಿಗಳ ಆಡಂಬರವಾಗುತ್ತಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಹೇಳಿಕೆ ನೀಡಿದ ಅನಂತ ಕುಮಾರ್ ಹೆಗಡೆ ಅಭಿವೃದ್ಧಿಯ ಹೆಸರಿನಲ್ಲಿ ಮಂಗಳೂರಿಗೆ ತಲೆನೋವಾಗಿದ್ದು ಮಂಗಳೂರಿನ ಮೂಲ ನಿವಾಸಿಗಳಲ್ಲ. ಕೇರಳ ದವರು, ನಮ್ಮ ಊರಿನ ಅಭಿವೃದ್ಧಿ ಲಾಭವನ್ನು ನಾವೇ ಪಡೆದುಕೊಳ್ಳಬೇಕು, ಮಂಗ ಳೂರಿನ ಅಭಿವೃದ್ಧಿ ಲಾಭವನ್ನು ಕೇರಳ ದವರು ಪಡೆದುಕೊಳ್ಳುತಿದ್ದಾರೆ ನಾವು ಬೇರೆಡೆ ಹೋಗಿ ಅಲ್ಪ ಸಂಬಳಕ್ಕೆ ಚಾಕರಿ ಮಾಡುತಿದ್ದೇವೆ ಎಂದರು.

ಇಷ್ಟು ದಿನ ಅಭಿವೃದ್ಧಿ ಬಗ್ಗೆ ಹೇಳುತಿದ್ದೆವು ಆದರೇ ಆ ದಿಕ್ಕಿನೆಡೆ ದಾಪುಗಾಲು ಹಾಕಿರ ಲ್ಲಿಲ್ಲ. ಉತ್ತರ ಕನ್ನಡ ಜಿಲ್ಲೆಯನ್ನು ಅಭಿವೃದ್ಧಿಯಡೆ ದಾಪುಗಾಲು ಹಾಕುತಿದ್ದೇವೆ. ಜಿಲ್ಲೆ ಯಲ್ಲಿ ಮಂಗಳೂರಿಗಿಂತ ಅತೀ ದೊಡ್ಡ ಪೋರ್ಟ ಅನ್ನು ನಿರ್ಮಾಣ ಮಾಡುತಿದ್ದೇವೆ. ಏರ್ ಪೋರ್ಟ ಬರಲಿದೆ. ಇಲ್ಲಿ ಅಭಿವೃದ್ದಿ ಮಾಡಿಯೇ ನಾನು ಮಿಶ್ರಮಿಸುತ್ತೇನೆ ಎಂದರು.