Wednesday, 1st February 2023

ಕಾಂಗ್ರೆಸ್ ಎಂಎಲ್’ಸಿಗಳಿಗೆ ದೆಹಲಿಗೆ ಬುಲಾವ್

Siddaramayya

ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ್ ವಿರೋಧಿಸಿ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ದೇಶದ ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ಸಿಗಳಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.

ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್’ನ ಎಲ್ಲಾ ಎಂಎಲ್ಸಿಗಳೂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳಿದ್ದು, ಮಂಗಳ ವಾರ ಸಂಜೆಯೊಳಗೆ ಎಲ್ಲಾ ಕಾಂಗ್ರೆಸ್ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿದೆ.

ನಾಳೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯ ಕಾಂಗ್ರೆಸ್’ನ ಎಲ್ಲಾ ಶಾಸಕರೂ, ಎಂಎಲ್ ಸಿಗಳು ದೆಹಲಿಗೆ ಆಗಮಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

error: Content is protected !!