Friday, 3rd April 2020

ಚುನಾವಣಾ ಆಯೋಗದ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರ ಕಚೇರಿ ಮುಂಭಾಗದಲ್ಲಿ ಕಾಂಗ್ರೆೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.

ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಉಪಚುನಾವಣೆಗೆ ಚುನಾವಣಾ ಆಯೋಗ ವಿಧಿಸಿರುವ ನೀತಿ ಸಂಹಿತೆಯನ್ನು ಬಿಜೆಪಿ ಅಭ್ಯರ್ಥಿಗಳು ಉಲ್ಲಂಸಿದ್ದರೂ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೆಪಿಸಿಸಿ ವತಿಯಿಂದ ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆೆಸ್ ಕಾರ್ಯಕರ್ತರು, ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿಿದ್ದರೂ ಚುನಾವಣಾ ಆಯೋಗ ಏಕೆ ಕ್ರಮ ಕೈಗೊಳ್ಳುತ್ತಿಿಲ್ಲ ಎಂದು ಕಚೇರಿಗೆ ಮುತ್ತಿಿಗೆ ಹಾಕಲು ಮುಂದಾದರು. ಆಯೋಗವು ತನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೇ ಬಿಜೆಪಿ ಏಜೆಂಟ್‌ನಂತೆ ವರ್ತಿಸುತ್ತಿಿದೆ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಪ್ರಕಾಶ್ ರಾಥೋಡ್ ಮಾತನಾಡಿ, ಮುಖ್ಯಮಂತ್ರಿಿ ಬಿ.ಎಸ್.ಯಡಿಯೂರಪ್ಪ ಅವರು ತಾವು ಮುಖ್ಯಮಂತ್ರಿಿಯಾಗಿ ಮುಂದುವರಿಯಲು ವೀರಶೈವ ಲಿಂಗಾಯತ ಸಮುದಾಯದ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಎಂದಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಸೀರೆ ಹಂಚಿ ಮತದಾರರಿಗೆ ಆಮಿಷವೊಡ್ಡಲಾಗುತ್ತಿಿದೆ. ಬಿಜೆಪಿಯ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷದ ವತಿಯಿಂದ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣಾ ಆಯೋಗವು ಕೇಂದ್ರ ಸರಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿಿದೆ. ಕೂಡಲೇ ನೀತಿ ಸಂಹಿತೆ ಉಲ್ಲಂಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *